ಕೊಪ್ಪ ಗ್ರಾಮಾಂತರ ಗ್ರಾ.ಪಂ.ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ,
ಕೊಪ್ಪ ಗ್ರಾಮಾಂತರ ಗ್ರಾ.ಪಂ.ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ,
ಕೊಪ್ಪ: ದೇಶದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೊಪ್ಪ ಗ್ರಾಮಾಂತರ ಗ್ರಾಮ ಪಂಚಾಯಿತಿಯಲ್ಲಿ ಶನಿವಾರ (ಆ.15) ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಕೊಪ್ಪ ತಾಲ್ಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಓಣಿತೋಟ ರತ್ನಾಕರ್ ಅವರು ಧ್ವಜಾರೋಹಣ ನೆರವೇರಿಸಿ, ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಮಹನೀಯರನ್ನು ಸ್ಮರಿಸಿದರು.
ಈ ಸಂದರ್ಭದಲ್ಲಿ ಕೊಪ್ಪ ಗ್ರಾಮಾಂತರ ಗ್ರಾಮ ಪಂಚಾಯಿತಿ ಪಿಡಿಒ ಅನಿಲ್, ಕಸಬಾ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಪೂಜಾರಿ, ಗ್ಯಾರೆಂಟಿ ಸಮಿತಿ ಸದಸ್ಯ ನರೇಂದ್ರ ಶೆಟ್ಟಿ, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.




Comments
Post a Comment