Posts

Showing posts from September, 2026

ಸರ್ಕಾರ ಗುಂಡಿ ಮುಚ್ಚದಿದ್ದರೆ, ಸಾರ್ವಜನಿಕರಿಂದ ದೇಣಿಗೆ ಸಂಗ್ರಹ ಮಾಡಿ ಜೆಡಿಎಸ್ ಪಕ್ಷದ ವತಿಯಿಂದ ರಸ್ತೆ ಗುಂಡಿಗಳನ್ನು ಮುಚ್ಚಲಾಗುವುದು, ಸುಧಾಕರ್ ಎಸ್ ಶೆಟ್ಟಿ,

Image
  ಸರ್ಕಾರ ಗುಂಡಿ ಮುಚ್ಚದಿದ್ದರೆ, ಸಾರ್ವಜನಿಕರಿಂದ ದೇಣಿಗೆ ಸಂಗ್ರಹ ಮಾಡಿ ಜೆಡಿಎಸ್ ಪಕ್ಷದ ವತಿಯಿಂದ ರಸ್ತೆ ಗುಂಡಿಗಳನ್ನು ಮುಚ್ಚಲಾಗುವುದು, ಸುಧಾಕರ್ ಎಸ್ ಶೆಟ್ಟಿ, ದಸರಕ್ಕೂ ಮುನ್ನ ರಸ್ತೆ ದುರಸ್ತಿ ಕೈಗೊಳ್ಳುವಂತೆ ಶಾಸಕ ಟಿ.ಡಿ. ರಾಜೇಗೌಡರಿಗೆ,ಸುಧಾಕರ್ ಎಸ್. ಶೆಟ್ಟಿಆಗ್ರಹ, ಕೊಪ್ಪ: ಶೃಂಗೇರಿ ಕ್ಷೇತ್ರದ ವಿವಿಧೆಡೆ ಹದಗೆಟ್ಟಿರುವ ರಸ್ತೆಗಳನ್ನು ತಕ್ಷಣ ದುರಸ್ತಿ ಮಾಡಿ, ರಸ್ತೆ ಹೊಂಡ-ಗುಂಡಿಗಳನ್ನು ಮುಚ್ಚುವಂತೆ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ  ಅವರನ್ನು ಜೆಡಿಎಸ್ ರಾಷ್ಟ್ರೀಯ ವಕ್ತಾರ ಸುಧಾಕರ್ ಎಸ್. ಶೆಟ್ಟಿ ಆಗ್ರಹಿಸಿದರು. ಬಾಲಗಡಿಯಲ್ಲಿರುವ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಕಳೆದ 2025ರ ಅಕ್ಟೋಬರ್ 29ರಂದು ಕೊಪ್ಪ ಮೇಲಿನ ಪೇಟೆಯಿಂದ ವಾಟರ್ ಟ್ಯಾಂಕ್‌ವರೆಗೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದ ಸಂದರ್ಭದಲ್ಲಿ ತಮ್ಮ ನೇತೃತ್ವದಲ್ಲಿ ಸ್ವಂತ ಖರ್ಚಿನಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಿಸಲಾಗಿತ್ತು. ಈ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿತ್ತು ಎಂದು ತಿಳಿಸಿದರು. ಇದೀಗ ದಸರಾ ಮಹೋತ್ಸವ ಸಮೀಪಿಸುತ್ತಿದ್ದು, ಶೃಂಗೇರಿ, ಹರಿಹರಪುರ, ಬಸ್ತಿಮಠ, ಬಂಡಿಗಡಿ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ಪ್ರತಿದಿನ ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಆದರೆ ಕೊಪ್ಪ ಮುಖ್ಯರಸ್ತೆ,ಶೃಂಗೇರಿ ಪಟ್ಟಣದ ಭಾರತೀ ಬೀದಿ ಸೇರಿದಂತೆ ಹಲವು ಪ್ರಮುಖ ರಸ್ತೆಗಳು ಗುಂಡಿಗಳಿಂದ ಹದಗೆಟ್ಟ...

ಕೊಪ್ಪ ತಾಲ್ಲೂಕಿನಲ್ಲಿ ಪಂಚ ಗ್ಯಾರಂಟಿ ಯೋಜನೆಗಳಡಿ ₹299.50 ಕೋಟಿ ವೆಚ್ಚ

Image
  ಕೊಪ್ಪ ತಾಲ್ಲೂಕಿನಲ್ಲಿ ಪಂಚ ಗ್ಯಾರಂಟಿ ಯೋಜನೆಗಳಡಿ ₹299.50 ಕೋಟಿ ವೆಚ್ಚ ಕೊಪ್ಪ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಕಳೆದ ಮೂರು ವರ್ಷಗಳಲ್ಲಿ ಕೊಪ್ಪ ತಾಲ್ಲೂಕಿನ ಜನರಿಗೆ ವಿವಿಧ ಯೋಜನೆಗಳಡಿ ಒಟ್ಟು ₹299 ಕೋಟಿ 50 ಲಕ್ಷ 90 ಸಾವಿರದ 425 ರೂ. ವೆಚ್ಚವಾಗಿದೆ ಎಂದು ಕೊಪ್ಪ ತಾಲ್ಲೂಕಿನ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಓಣಿ ತೋಟ ರತ್ನಾಕರ್ ತಿಳಿಸಿದರು. ಗೃಹಲಕ್ಷ್ಮಿ ಯೋಜನೆಯಡಿ 18,740 ಫಲಾನುಭವಿಗಳಿಗೆ ಪ್ರತಿ ತಿಂಗಳು ₹2,000ರಂತೆ ಹಣ ಜಮೆಯಾಗಿದ್ದು, ಮೂರು ವರ್ಷಗಳ ಅವಧಿಯಲ್ಲಿ ಒಟ್ಟು ₹110 ಕೋಟಿ 64 ಲಕ್ಷ 92 ಸಾವಿರ ರೂ. ವೆಚ್ಚವಾಗಿದೆ ಎಂದು ತಿಳಿಸಿದರು. ಗೃಹಜ್ಯೋತಿ ಯೋಜನೆಯಡಿ 22,643 ಫಲಾನುಭವಿಗಳು ಪ್ರಯೋಜನ ಪಡೆದಿದ್ದು, ಮೂರು ವರ್ಷಗಳಲ್ಲಿ ₹32 ಕೋಟಿ 31 ಲಕ್ಷ 74 ಸಾವಿರ ರೂ. ಮೊತ್ತದ ವಿದ್ಯುತ್ ಸೌಲಭ್ಯ ಕಲ್ಪಿಸಲಾಗಿದೆ. ಅನ್ನಭಾಗ್ಯ ಯೋಜನೆಯಡಿ 15,622 ಕಾರ್ಡ್‌ದಾರರ 53,417 ಫಲಾನುಭವಿಗಳಿಗೆ ಅಕ್ಕಿಯ ಬದಲಾಗಿ ₹14 ಕೋಟಿ 22 ಲಕ್ಷ 18 ಸಾವಿರದ 430 ರೂ. ಹಣ ನೀಡಲಾಗಿದೆ. ಇದರ ಜೊತೆಗೆ 46,121.75 ಕ್ವಿಂಟಾಲ್ ಅಕ್ಕಿ, ಅಂದಾಜು ₹10 ಕೋಟಿ 76 ಲಕ್ಷ 44 ಸಾವಿರದ 473 ರೂ. ಮೌಲ್ಯದ ಅಕ್ಕಿಯನ್ನು ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು. ಶಕ್ತಿ ಯೋಜನೆಯಡಿ ಚಿಕ್ಕಮಗಳೂರು, ಎನ್.ಆರ್.ಪುರ, ಶೃಂಗೇರಿ ಹಾಗೂ ಕೊಪ್ಪ ವ್ಯಾಪ್ತಿಯಲ್ಲಿ 3 ಕೋಟಿ 6 ಲಕ್ಷ 68 ಸಾವಿರದ 146 ಪ್ರಯಾಣಿಕರು ಉಚ...

ಜಂಕ್ ಫುಡ್ ವಿರುದ್ಧ ವಿದ್ಯಾರ್ಥಿಗಳ ಜಾಗೃತಿ ಮೆರವಣಿಗೆ

Image
  ಜಂಕ್ ಫುಡ್ ವಿರುದ್ಧ ವಿದ್ಯಾರ್ಥಿಗಳ ಜಾಗೃತಿ ಮೆರವಣಿಗೆ, ಕೊಪ್ಪ: ಹದಿಹರೆಯದ ಮಕ್ಕಳಲ್ಲಿ ಆರೋಗ್ಯದ ಅರಿವು ಮೂಡಿಸುವ ಹಾಗೂ ಜಂಕ್ ಫುಡ್‌ನ ಅತಿಯಾದ ಸೇವನೆಯಿಂದ ದೂರವಿರುವಂತೆ ಜಾಗೃತಿ ಮೂಡಿಸುವ ಉದ್ದೇಶದಿಂದ St. Joseph's English Medium School, Koppa ಇವರ ಆಶ್ರಯದಲ್ಲಿ ವಿದ್ಯಾರ್ಥಿಗಳ ಜಾಗೃತಿ ಮೆರವಣಿಗೆ ನಡೆಯಿತು. ವಿದ್ಯಾರ್ಥಿಗಳು ಜಾಗೃತಿ ಫಲಕಗಳನ್ನು ಹಿಡಿದು, “ಜಂಕ್ ಫುಡ್ ಬಳಕೆ ಕಡಿಮೆ ಮಾಡಿ, ಆರೋಗ್ಯಕರ ಆಹಾರ ಸೇವಿಸಿ” ಎಂಬ ಸಂದೇಶ ಸಾರುತ್ತಾ ಕೊಪ್ಪ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ನಂತರ ಕೊಪ್ಪ ಬಸ್ ನಿಲ್ದಾಣದ ಮುಂಭಾಗ ನಡೆದ ಜಾಗೃತಿ ಸಭೆಯಲ್ಲಿ ಪೌಷ್ಟಿಕ ಆಹಾರ, ಸ್ವಚ್ಛತೆ ಹಾಗೂ ದೈಹಿಕ ಚಟುವಟಿಕೆಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಾಯಿತು. ದೈಹಿಕ ಶಿಕ್ಷಕ ಅರವಿಂದ್ ಹಾಗೂ ಶಾಲಾ ಶಿಕ್ಷಕರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸಿದರು.

ಮಲೆನಾಡಿನ ಸಮಸ್ಯೆಗಳ ಕುರಿತು ಸಂವಾದಕ್ಕೆ ಡಿ.ಕೆ. ಶಿವಕುಮಾರ್ ಬಾಳೆಹೊನ್ನೂರಿಗೆ ಭೇಟಿ,

Image
  ಮಲೆನಾಡಿನ ಸಮಸ್ಯೆಗಳ ಕುರಿತು ಸಂವಾದಕ್ಕೆ ಡಿ.ಕೆ. ಶಿವಕುಮಾರ್ ಬಾಳೆಹೊನ್ನೂರಿಗೆ ಭೇಟಿ, ಚಿಕ್ಕಮಗಳೂರು ಜಿಲ್ಲೆ: ಶೃಂಗೇರಿ ಕ್ಷೇತ್ರದ ಜನಪ್ರಿಯ ಶಾಸಕ ಟಿ.ಡಿ. ರಾಜೇಗೌಡ ಸೇರಿದಂತೆ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಜಿಲ್ಲಾ ಕಾಂಗ್ರೆಸ್ ಮುಖಂಡರ ಪ್ರಯತ್ನದ ಫಲವಾಗಿ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೆಪ್ಟೆಂಬರ್ 19ರಂದು ಬಾಳೆಹೊನ್ನೂರಿಗೆ ಭೇಟಿ ನೀಡಲಿದ್ದಾರೆ. ಸೆಪ್ಟೆಂಬರ್ 19ರ ಶನಿವಾರ ಮಧ್ಯಾಹ್ನ 1 ಗಂಟೆಗೆ ಬಾಳೆಹೊನ್ನೂರಿನ ಗಣಪತಿ ಪೆಂಡಾಲ್ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಮಲೆನಾಡು ಭಾಗದ ರೈತರು ಹಾಗೂ ಸಾರ್ವಜನಿಕರೊಂದಿಗೆ ನೇರವಾಗಿ ಸಂವಾದ ನಡೆಸಿ, ಮಲೆನಾಡಿನ ವಿವಿಧ ಸಮಸ್ಯೆಗಳನ್ನು ಆಲಿಸುವ ಕಾರ್ಯಕ್ರಮ ನಡೆಯಲಿದೆ. ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಕಳಸ, ಮೂಡಿಗೆರೆ ಹಾಗೂ ಚಿಕ್ಕಮಗಳೂರು ತಾಲೂಕುಗಳ ರೈತರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ನೇರವಾಗಿ ತಿಳಿಸುವಂತೆ ಮನವಿ ಮಾಡಲಾಗಿದೆ. ಮಲೆನಾಡಿನ ಜನರ ಪ್ರಮುಖ ಸಮಸ್ಯೆಗಳು, ರೈತರ ವಿಚಾರಗಳು ಹಾಗೂ ಸಾರ್ವಜನಿಕರ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜನರೊಂದಿಗೆ ನೇರವಾಗಿ ಚರ್ಚಿಸಲಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ಮಹತ್ವ ಪಡೆದುಕೊಂಡಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಶಾಸಕರಾದ ಟಿ.ಡಿ. ರಾಜೇಗೌಡ, ಹೆಚ್.ಟಿ. ತಮ್ಮಯ್ಯ, ನಯನ ಮೋಟಮ್...

ಮಾಜಿ ಯೋಧನಿಗೆ ಜಾತಿ ಪ್ರಮಾಣಪತ್ರ ರಿಜೆಕ್ಟ್

Image
  ಯೋಧನಿಗೆ ಜಾತಿ ಪ್ರಮಾಣಪತ್ರ ನೀಡುವಂತೆ ಅಧಿಕಾರಿಗಳಿಗೆ ತರಾಟೆ, ಕೊಪ್ಪ: ದೇಶ ರಕ್ಷಣೆಗಾಗಿ ಸೇವೆ ಸಲ್ಲಿಸಿದ ಯೋಧರೊಬ್ಬರಿಗೆ ಜಾತಿ ಪ್ರಮಾಣಪತ್ರ ನೀಡುವ ವಿಚಾರದಲ್ಲಿ ಹಲವು ತಿಂಗಳುಗಳಿಂದ ವಿಳಂಬವಾಗಿರುವ ಬಗ್ಗೆ ಸಾರ್ವಜನಿಕರಿಂದ ಅಸಮಾಧಾನ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 12ರಂದು ಶನಿವಾರ ನಡೆದ ತಾಲ್ಲೂಕು ಮಟ್ಟದ ಪ್ರಜಾ ಸೇವಾ ಜನಾಂದೋಲನ ಕಾರ್ಯಕ್ರಮದಲ್ಲಿ ವಿಷಯ ಪ್ರಸ್ತಾಪಗೊಂಡಿತು. ಯೋಧನಿಗೆ ಜಾತಿ ಪ್ರಮಾಣಪತ್ರ ನೀಡಲು ವಿಳಂಬ ಮಾಡುತ್ತಿರುವ ಕಂದಾಯ ಇಲಾಖೆಯ ಅಧಿಕಾರಿಗಳನ್ನು ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ ಹಾಗೂ ವಕೀಲರಾದ ಕಾಂಗ್ರೆಸ್ ಪಕ್ಷದ ರಾಜ್ಯ ವಕ್ತಾರರಾದ ಸುಧೀರ್ ಕುಮಾರ್ ಮೂರೊಲ್ಲಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡು, ಜನಸಾಮಾನ್ಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಖ್ಯಾತ ವಕೀಲರು ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ ಅವರು ಕೂಡ ಯೋಧನ ಸಮಸ್ಯೆಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಧ್ವನಿ ಎತ್ತಿ, ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸಿದರು. ದೇಶಕ್ಕಾಗಿ ಸೇವೆ ಸಲ್ಲಿಸಿದ ಯೋಧನೊಬ್ಬ ತನ್ನ ಮೂಲಭೂತ ದಾಖಲೆಗಾಗಿ ಹಲವು ತಿಂಗಳುಗಳಿಂದ ಕಚೇರಿಗಳಿಗೆ ಅಲೆದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದು ಬೇಸರದ ಸಂಗತಿ. ಈ ವಿಚಾರದಲ್ಲಿ ಶಾಸಕ ಟಿ.ಡಿ. ರಾಜೇಗೌಡ ಹಾಗೂ ಸುಧೀರ್ ಕ...

ಮಾಜಿ ಯೋಧನಿಗೆ ಜಾತಿ ಪ್ರಮಾಣಪತ್ರ ರಿಜೆಕ್ಟ್ ತಾಲ್ಲೂಕ್ ಕಚೇರಿ ಕೊಪ್ಪ

Image
  ಯೋಧನಿಗೆ ಜಾತಿ ಪ್ರಮಾಣಪತ್ರ ನೀಡುವಂತೆ ಅಧಿಕಾರಿಗಳಿಗೆ ತರಾಟೆ, ಕೊಪ್ಪ: ದೇಶ ರಕ್ಷಣೆಗಾಗಿ ಸೇವೆ ಸಲ್ಲಿಸಿದ ಯೋಧರೊಬ್ಬರಿಗೆ ಜಾತಿ ಪ್ರಮಾಣಪತ್ರ ನೀಡುವ ವಿಚಾರದಲ್ಲಿ ಹಲವು ತಿಂಗಳುಗಳಿಂದ ವಿಳಂಬವಾಗಿರುವ ಬಗ್ಗೆ ಸಾರ್ವಜನಿಕರಿಂದ ಅಸಮಾಧಾನ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 12ರಂದು ಶನಿವಾರ ನಡೆದ ತಾಲ್ಲೂಕು ಮಟ್ಟದ ಪ್ರಜಾ ಸೇವಾ ಜನಾಂದೋಲನ ಕಾರ್ಯಕ್ರಮದಲ್ಲಿ ವಿಷಯ ಪ್ರಸ್ತಾಪಗೊಂಡಿತು. ಯೋಧನಿಗೆ ಜಾತಿ ಪ್ರಮಾಣಪತ್ರ ನೀಡಲು ವಿಳಂಬ ಮಾಡುತ್ತಿರುವ ಕಂದಾಯ ಇಲಾಖೆಯ ಅಧಿಕಾರಿಗಳನ್ನು ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ ಹಾಗೂ ವಕೀಲರಾದ ಕಾಂಗ್ರೆಸ್ ಪಕ್ಷದ ರಾಜ್ಯ ವಕ್ತಾರರಾದ ಸುಧೀರ್ ಕುಮಾರ್ ಮೂರೊಲ್ಲಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡು, ಜನಸಾಮಾನ್ಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಖ್ಯಾತ ವಕೀಲರು ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ ಅವರು ಕೂಡ ಯೋಧನ ಸಮಸ್ಯೆಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಧ್ವನಿ ಎತ್ತಿ, ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸಿದರು. ದೇಶಕ್ಕಾಗಿ ಸೇವೆ ಸಲ್ಲಿಸಿದ ಯೋಧನೊಬ್ಬ ತನ್ನ ಮೂಲಭೂತ ದಾಖಲೆಗಾಗಿ ಹಲವು ತಿಂಗಳುಗಳಿಂದ ಕಚೇರಿಗಳಿಗೆ ಅಲೆದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದು ಬೇಸರದ ಸಂಗತಿ. ಈ ವಿಚಾರದಲ್ಲಿ ಶಾಸಕ ಟಿ.ಡಿ. ರಾಜೇಗೌಡ ಹಾಗೂ ಸುಧೀರ್ ಕ...
Image
 

ಕೊಪ್ಪ ಪೌರ ಗಣೇಶೋತ್ಸವಕ್ಕೆ 52ರ ಸಂಭ್ರಮ: ಭಕ್ತಿ, ಕಲೆ, ಸಂಸ್ಕೃತಿಯ ವೈಭವಕ್ಕೆ ಸಜ್ಜಾದ ಕೊಪ್ಪ ಪಟ್ಟಣ,

Image
ಕೊಪ್ಪ ಪೌರ ಗಣೇಶೋತ್ಸವಕ್ಕೆ 52ರ ಸಂಭ್ರಮ: ಭಕ್ತಿ, ಕಲೆ, ಸಂಸ್ಕೃತಿಯ ವೈಭವಕ್ಕೆ ಸಜ್ಜಾದ ಕೊಪ್ಪ ಪಟ್ಟಣ, ಕೊಪ್ಪ: ಕೊಪ್ಪದ ಪೌರ ಗಣೇಶೋತ್ಸವ ಸಮಿತಿ ವತಿಯಿಂದ 52ನೇ ವರ್ಷದ ಗಣೇಶೋತ್ಸವವನ್ನು ಸೆಪ್ಟೆಂಬರ್ 14ರಿಂದ 24ರವರೆಗೆ ಅದ್ದೂರಿಯಾಗಿ ಆಚರಿಸಲು ಸಿದ್ಧತೆ ನಡೆದಿದೆ. ಜೆ.ಎಂ.ಜೆ. ಟಾಕೀಸ್ ಪಕ್ಕದಲ್ಲಿರುವ ‘ಶ್ರೀ ವಿನಾಯಕ ಮಂಟಪ’ದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳು ನಡೆಯಲಿವೆ. ವಿದ್ಯಾರ್ಥಿಗಳ ಪ್ರತಿಭೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸೆ.16ರಂದು ಪ್ರಾಥಮಿಕ, ಸೆ.17ರಂದು ಪ್ರೌಢಶಾಲೆ ಹಾಗೂ ಸೆ.20ರಂದು ಕಾಲೇಜು ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪ್ರಥಮ ₹10,000, ದ್ವಿತೀಯ ₹5,000 ಹಾಗೂ ತೃತೀಯ ₹3,000 ನಗದು ಬಹುಮಾನ ನೀಡಲಾಗುವುದು. ಸೆ.20ರಂದು ನಡೆಯುವ ಜಿಲ್ಲಾ ಮಟ್ಟದ ಜಾನಪದ ಸ್ಪರ್ಧೆಯಲ್ಲಿ ಪ್ರಥಮ ₹15,000, ದ್ವಿತೀಯ ₹10,000 ಹಾಗೂ ತೃತೀಯ ₹5,000 ಬಹುಮಾನ ನೀಡಲಾಗುತ್ತದೆ. ಇದರೊಂದಿಗೆ ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆ, ಧಾರ್ಮಿಕ ರಸಪ್ರಶ್ನೆ ಹಾಗೂ ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆಯನ್ನೂ ಆಯೋಜಿಸಲಾಗಿದೆ. ಪ್ರತಿದಿನ ಸಂಜೆ 7 ಗಂಟೆಗೆ ಸಂಗೀತ ರಸಮಂಜರಿ, ನೃತ್ಯ ವೈಭವ, ನಗೆ ನಾಟಕ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿವೆ. ಸೆ.14ರಂದು ಗಣೇಶನ ಪ್ರತಿಷ್ಠಾಪನೆ, ಸೆ.20ರಂದು ಮಹಾಗಣಪತಿ ಹೋಮ, ಮಹಾಪೂಜೆ ಹಾ...

ಜಿಲ್ಲಾಮಟ್ಟದ ಕರಾಟೆ ಕ್ರೀಡಾಕೂಟದಲ್ಲಿ ಕೊಪ್ಪದ ಇಬ್ಬರು ವಿದ್ಯಾರ್ಥಿಗಳ ರಾಜ್ಯಮಟ್ಟಕ್ಕೆ ಆಯ್ಕೆ,

Image
  ಜಿಲ್ಲಾಮಟ್ಟದ ಕರಾಟೆ ಕ್ರೀಡಾಕೂಟದಲ್ಲಿ ಕೊಪ್ಪದ ಇಬ್ಬರು ವಿದ್ಯಾರ್ಥಿಗಳ ರಾಜ್ಯಮಟ್ಟಕ್ಕೆ ಆಯ್ಕೆ, ಕೊಪ್ಪ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಕರಾಟೆ ಅಸೋಸಿಯೇಷನ್‌ ಸಹಯೋಗದಲ್ಲಿ ಸೆಪ್ಟೆಂಬರ್ 7ರಂದು ತರೀಕೆರೆಯ ಅಂಬೇಡ್ಕರ್ ಭವನದಲ್ಲಿ ನಡೆದ ಜಿಲ್ಲಾಮಟ್ಟದ ಕರಾಟೆ ಕ್ರೀಡಾಕೂಟದಲ್ಲಿ ಕೊಪ್ಪದ ಸೇಂಟ್ ಜೋಸೆಫ್ ಇಂಗ್ಲಿಷ್ ಮೀಡಿಯಂ ಶಾಲೆಯ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಅಂಡರ್‌-14ರ 50ರಿಂದ 55 ಕೆ.ಜಿ. ವಿಭಾಗದಲ್ಲಿ ಸಣ್ಣಕೆರೆಯ ಅಬಿಶ್ ರುಹಿನ್ ಸೋನ್ಸ್, ಹಾಗೂ ಅಂಡರ್‌-17ರ 70 ಕೆ.ಜಿ. ವಿಭಾಗದಲ್ಲಿ ಕಶ್ಯಪ್ ಜಿ.ಆರ್. ಅವರು ಉತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟದ ಸ್ಪರ್ಧೆಗೆ ನೇರ ಆಯ್ಕೆ ಪಡೆದುಕೊಂಡಿದ್ದಾರೆ. ಅಬಿಶ್ ರುಹಿನ್ ಸೋನ್ಸ್ ಅವರು ಅಲೈವ್ ಸ್ಟಾರ್ಲಿ ಸೋನ್ಸ್ ಹಾಗೂ ರುತ್ ಸೋನ್ಸ್, ಸಣ್ಣಕೆರೆ ಅವರ ಪುತ್ರರಾಗಿದ್ದು, ಸೇಂಟ್ ಜೋಸೆಫ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇಬ್ಬರು ವಿದ್ಯಾರ್ಥಿಗಳೂ ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ತಮ್ಮ ಪ್ರತಿಭೆ ಹಾಗೂ ಕಠಿಣ ಪರಿಶ್ರಮವನ್ನು ಪ್ರದರ್ಶಿಸಿ ರಾಜ್ಯಮಟ್ಟಕ್ಕೆ ಅರ್ಹತೆ ಪಡೆದಿರುವುದು ಕೊಪ್ಪ ತಾಲ್ಲೂಕಿಗೆ ಹೆಮ್ಮೆಯ ಸಂಗತಿಯಾಗಿದೆ. ರಾಜ್ಯಮಟ್ಟದ ಕರಾಟೆ ಕ್ರೀಡಾಕೂಟ ಬೆಂಗಳೂರಿನ ಉತ್ತರ ವಲಯದಲ್ಲಿ ನಡೆಯಲಿದ್ದು, ರಾಜ್ಯಮಟ್ಟದಲ್ಲೂ ಉತ್ತಮ ಸಾಧನ...

ಸಚಿವ ಸಂಪುಟದ ಮಹತ್ವದ ನಿರ್ಧಾರಗಳಿಗೆ ಓಣಿತೋಟ ರತ್ನಾಕರ್ ಸ್ವಾಗತ,

Image
  ಸಚಿವ ಸಂಪುಟದ ಮಹತ್ವದ ನಿರ್ಧಾರಗಳಿಗೆ ಓಣಿತೋಟ ರತ್ನಾಕರ್ ಸ್ವಾಗತ, ಕೊಪ್ಪ: ಸೆಪ್ಟೆಂಬರ್ 9ರಂದು ನಡೆದ ಕರ್ನಾಟಕ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿರುವ ಎರಡು ಮಹತ್ವದ ನಿರ್ಧಾರಗಳನ್ನು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕೊಪ್ಪ ತಾಲ್ಲೂಕು ಅಧ್ಯಕ್ಷರಾದ ಓಣಿತೋಟ ರತ್ನಾಕರ್ ಸ್ವಾಗತಿಸಿದ್ದಾರೆ. ಕೂಲಿ ಕಾರ್ಮಿಕರು ಸೇರಿದಂತೆ ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿ ವರ್ಗದ ನಿವೇಶನ ರಹಿತರಿಗೆ ಜಿಲ್ಲೆಯಲ್ಲಿ 50 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡುವ ಬೃಹತ್ ಕಾರ್ಯಕ್ರಮ ಹಾಗೂ ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಆಧಾರ್ ಕಾರ್ಡ್ ಬದಲಿಗೆ ಸ್ಮಾರ್ಟ್ ಕಾರ್ಡ್ ವಿತರಿಸುವ ನಿರ್ಧಾರ ಅತ್ಯಂತ ಮಹತ್ವದ್ದಾಗಿದೆ ಎಂದು ಅವರು ತಿಳಿಸಿದ್ದಾರೆ. ಈ ಎರಡೂ ನಿರ್ಧಾರಗಳು ರಾಜ್ಯದ ಜನಸಾಮಾನ್ಯರಿಗೆ ಅನುಕೂಲವಾಗಲಿದ್ದು, ಕರ್ನಾಟಕದ ಇತಿಹಾಸದಲ್ಲಿ ಮಹತ್ವದ ಹೆಜ್ಜೆಗಳಾಗಿವೆ ಎಂದು ರತ್ನಾಕರ್ ಅಭಿಪ್ರಾಯಪಟ್ಟಿದ್ದಾರೆ. ನಿವೇಶನ ರಹಿತರ ಸಮಸ್ಯೆ ಕುರಿತು ವಿಧಾನಸಭೆಯಲ್ಲಿ ಧ್ವನಿ ಎತ್ತಿ, ನಿವೇಶನ ರಹಿತರಿಗೆ ಹಕ್ಕುಪತ್ರ ನೀಡುವಂತೆ ಒತ್ತಾಯಿಸಿದ್ದ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ ಅವರಿಗೂ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಹಾಗೂ ಶಾಸಕ ಟಿ.ಡಿ. ರಾಜೇಗೌಡ ಅವರಿಗೆ ಶೃಂಗೇರಿ ಕ್ಷೇತ್ರದ ಜನತೆಯ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಓಣಿತೋಟ ರತ್...

ಕೊಪ್ಪ ಪೊಲೀಸರ ಭರ್ಜರಿ ಕಾರ್ಯಾಚರಣೆ: ಅಕ್ರಮ ಮರಳು ಸಾಗಾಟಕ್ಕೆ ಬ್ರೇಕ್!,

Image
  ಕೊಪ್ಪ ಪೊಲೀಸರ ಭರ್ಜರಿ ಕಾರ್ಯಾಚರಣೆ: ಅಕ್ರಮ ಮರಳು ಸಾಗಾಟಕ್ಕೆ ಬ್ರೇಕ್!, ಕೊಪ್ಪ ಪೊಲೀಸ್ ಠಾಣೆ ಪಿಎಸ್‌ಐ ಮಧು ಬಿ.ಇ. ನೇತೃತ್ವದ ಪೊಲೀಸ್ ತಂಡದಿಂದ ಅಕ್ರಮ ಮರಳು ಸಾಗಾಟದ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ, ದಿನಾಂಕ 07/09/2026 ರಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ, ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಮರಳನ್ನು ಸಾಗಿಸುತ್ತಿದ್ದ KA-14 B-4400 ನೋಂದಣಿ ಸಂಖ್ಯೆಯ ಟಿಪ್ಪರ್‌ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ತೀರ್ಥಹಳ್ಳಿ ತಾಲೂಕಿನ ದೇವಂಗಿ ಗ್ರಾಮದ ರಾಘವೇಂದ್ರ ಬಾಣಂಕ್ಕಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು, ಮುಂದಿನ ಕಾನೂನು ಕ್ರಮ ಕೈಗೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಇನ್ನು ಈ ಅಕ್ರಮ ಮರಳು ಸಾಗಾಟ ಪ್ರಕರಣದಲ್ಲಿ ಹಲವರು ಭಾಗಿಯಾಗಿದ್ದಾರೆ ಎನ್ನಲಾಗಿದೆ ಅವರ ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ. ಅಕ್ರಮ ಮರಳು ದಂಧೆಕೋರರಿಗೆ ಸಿಂಹಸ್ವಪ್ನವಾಗಿರುವ ಕೊಪ್ಪ ಪೊಲೀಸರು, ನೈಸರ್ಗಿಕ ಸಂಪನ್ಮೂಲಗಳ ಅಕ್ರಮ ಸಾಗಾಟಕ್ಕೆ ಕಡಿವಾಣ ಹಾಕಲು ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಬಾಳೆಹೊನ್ನೂರಿನಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ,

Image
  ಬಾಳೆಹೊನ್ನೂರಿನಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ, ಬಾಳೆಹೊನ್ನೂರು: ಬಾಳೆಹೊನ್ನೂರು ಕಡ್ಲೆಮಕ್ಕಿ ಸಮುದಾಯ ಭವನದಲ್ಲಿ ಸೋಮವಾರ, ಸೆಪ್ಟೆಂಬರ್ 7ರಂದು ಬಾಳೆಹೊನ್ನೂರು ಹೋಬಳಿ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ನಡೆಯಿತು. ಸಮಾವೇಶವನ್ನು ಶೃಂಗೇರಿ ಕ್ಷೇತ್ರದ ಜನಪ್ರಿಯ ಶಾಸಕರಾದ ಟಿ. ಡಿ. ರಾಜೇಗೌಡ ಅವರು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಮುಖ್ಯ ಅತಿಥಿಗಳು ಹಾಗೂ ಶೃಂಗೇರಿ ಕ್ಷೇತ್ರದ ಮೂರು ತಾಲೂಕುಗಳ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಅಧ್ಯಕ್ಷರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಭದ್ರಾ ಕಾಡಾ ನಿಗಮದ ಅಧ್ಯಕ್ಷರಾದ ಡಾ. ಅಂಶುಮಂತ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಶಿವಾನಂದ ಸ್ವಾಮಿ, ಎನ್. ಆರ್. ಪುರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಚಂದ್ರಮ್ಮ, ಕೊಪ್ಪ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಓಣಿತೋಟ ರತ್ನಾಕರ್, ಶೃಂಗೇರಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಕೆ. ರಾಜು, ಎನ್. ಆರ್. ಪುರ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗೈರ್ಬೈಲ್ ನಟರಾಜ್, ಹನೀಫ್ ಬಾಳೆಹೊನ್ನೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು. ಇದರೊಂದಿಗೆ ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯರು, ಬಾಳೆಹೊನ್ನೂರು ಹೋಬಳಿಯ ಕಾಂಗ್ರೆಸ್ ಮುಖಂಡರು, ನಾಮನಿರ್ದೇಶಿತ ಸದಸ್ಯರು, ವಿವಿಧ ...

ಕೊಪ್ಪ: ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆಗೆ ಸಿದ್ಧತೆ,

Image
  ಕೊಪ್ಪ: ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆಗೆ ಸಿದ್ಧತೆ, ಕೊಪ್ಪ ತಾಲ್ಲೂಕಿನಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನಾ ಪ್ರಕ್ರಿಯೆ ಮುಂದಿನ ವಾರದಿಂದ ಆರಂಭವಾಗಲಿದೆ ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಓಣಿತೋಟ ರತ್ನಾಕರ್ ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಮರುಪರಿಶೀಲನೆಗಾಗಿ ಯಾವುದೇ ಕಾರಣಕ್ಕೂ ಕಚೇರಿಗಳಿಗೆ ಅಲೆದಾಡುವ ಅಗತ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಮರುಪರಿಶೀಲನಾ ಕಾರ್ಯಕ್ಕಾಗಿ ತರಬೇತಿ ಪಡೆದ ಅಂಗನವಾಡಿ ಶಿಕ್ಷಕರು ಹಾಗೂ ಪಂಚ ಗ್ಯಾರಂಟಿ ಯೋಜನೆಗಳ ಸಮಿತಿಯ ಸದಸ್ಯರು ಫಲಾನುಭವಿಗಳ ಮನೆಗಳಿಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅಗತ್ಯ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಂಡು, ಗಣತಿದಾರರು ಮನೆಗೆ ಭೇಟಿ ನೀಡಿದಾಗ ಸೂಕ್ತ ಮಾಹಿತಿ ಹಾಗೂ ದಾಖಲೆಗಳನ್ನು ನೀಡಿ ಸಹಕರಿಸುವಂತೆ ಮನವಿ ಮಾಡಲಾಗಿದೆ. ಫಲಾನುಭವಿಗಳ ಮನೆ ಬಾಗಿಲಿಗೆ ತೆರಳಿ ಮಾಹಿತಿ ಸಂಗ್ರಹಿಸುವ ಮೂಲಕ ಮರುಪರಿಶೀಲನಾ ಕಾರ್ಯವನ್ನು ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ಯಾವುದೇ ಗೊಂದಲಕ್ಕೆ ಒಳಗಾಗದೆ ಸಹಕರಿಸುವಂತೆ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಮನವಿ ಮಾಡಿದೆ. — ಓಣಿತೋಟ ರತ್ನಾಕರ್, ಅಧ್ಯಕ್ಷರು, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ಕೊಪ್ಪ ತಾಲ್ಲೂಕು. ಹೊಸ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ, 1. ವಾಸದ ಮನೆ ಮ್ಯಾಪಿಂಗ್ 2. ಪಾಸ್‌ಬುಕ್ 3. ಮೊಬೈಲ್ ...

ಕೊಪ್ಪ:- ಚಿನ್ನಾಭರಣ ಕಳ್ಳತನ ಪ್ರಕರಣ ಪತ್ತೆ: ಆರೋಪಿ ಬಂಧನ

Image
  ಕೊಪ್ಪ:- ಚಿನ್ನಾಭರಣ ಕಳ್ಳತನ ಪ್ರಕರಣ ಪತ್ತೆ: ಆರೋಪಿ ಬಂಧನ ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಚಿನ್ನಾಭರಣ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಗುಣವಂತೆ ಗ್ರಾಮದ ಗೋಲಿಕೊಪ್ಪ ವಾಸಿ ಪ್ರಮೋದ್ ಎಂಬುವವರ ಮನೆಯಲ್ಲಿ ಮುಡಿಗೆರೆ ತಾಲ್ಲೂಕಿನ ಗಾಂಧಿ ಗ್ರಾಮದ ಪ್ರವೀಣ್ ಜೀನ್ಸ್ ಜಯರಾಮ್, 39 ವರ್ಷ ಎಂಬಾತ ಕಳ್ಳತನ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ ಮಾಡಿದ್ದ ಆರೋಪಿ, ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ. ಈ ಕುರಿತು ಕೊಪ್ಪ ಪೊಲೀಸ್ ಠಾಣೆಯಲ್ಲಿ ಮೊ.ನಂ. 72/2026, ಕಲಂ 306 ಬಿಎನ್‌ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನಿಂದ 10 ಲಕ್ಷ ರೂಪಾಯಿ ಮೌಲ್ಯದ 76 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ತನಿಖೆ ಹಾಗೂ ಕಾರ್ಯಾಚರಣೆಯಲ್ಲಿ ಕೊಪ್ಪ ಪೊಲೀಸರು ಯಶಸ್ವಿಯಾಗಿದ್ದಾರೆ. ಚಿನ್ನಾಭರಣ ಕಳ್ಳತನ ಪ್ರಕರಣವನ್ನು ಪತ್ತೆಹಚ್ಚಿ ಆರೋಪಿಯನ್ನು ಬಂಧಿಸಿರುವ ಕೊಪ್ಪ ಪೊಲೀಸರ ಕಾರ್ಯಾಚರಣೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. 🖋️ ರೆಹಮಾನ್ ಸಣ್ಣಕೇರೆ  ವಾರ್ತಾ ಸಾರಥಿ ಡಿಜಿಟಲ್ ನ್ಯೂಸ್