ಕೊಪ್ಪ:- ಚಿನ್ನಾಭರಣ ಕಳ್ಳತನ ಪ್ರಕರಣ ಪತ್ತೆ: ಆರೋಪಿ ಬಂಧನ
ಕೊಪ್ಪ:- ಚಿನ್ನಾಭರಣ ಕಳ್ಳತನ ಪ್ರಕರಣ ಪತ್ತೆ: ಆರೋಪಿ ಬಂಧನ
ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಚಿನ್ನಾಭರಣ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಗುಣವಂತೆ ಗ್ರಾಮದ ಗೋಲಿಕೊಪ್ಪ ವಾಸಿ ಪ್ರಮೋದ್ ಎಂಬುವವರ ಮನೆಯಲ್ಲಿ ಮುಡಿಗೆರೆ ತಾಲ್ಲೂಕಿನ ಗಾಂಧಿ ಗ್ರಾಮದ ಪ್ರವೀಣ್ ಜೀನ್ಸ್ ಜಯರಾಮ್, 39 ವರ್ಷ ಎಂಬಾತ ಕಳ್ಳತನ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ ಮಾಡಿದ್ದ ಆರೋಪಿ, ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ.
ಈ ಕುರಿತು ಕೊಪ್ಪ ಪೊಲೀಸ್ ಠಾಣೆಯಲ್ಲಿ ಮೊ.ನಂ. 72/2026, ಕಲಂ 306 ಬಿಎನ್ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನಿಂದ 10 ಲಕ್ಷ ರೂಪಾಯಿ ಮೌಲ್ಯದ 76 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಪ್ರಕರಣದ ತನಿಖೆ ಹಾಗೂ ಕಾರ್ಯಾಚರಣೆಯಲ್ಲಿ ಕೊಪ್ಪ ಪೊಲೀಸರು ಯಶಸ್ವಿಯಾಗಿದ್ದಾರೆ.
ಚಿನ್ನಾಭರಣ ಕಳ್ಳತನ ಪ್ರಕರಣವನ್ನು ಪತ್ತೆಹಚ್ಚಿ ಆರೋಪಿಯನ್ನು ಬಂಧಿಸಿರುವ ಕೊಪ್ಪ ಪೊಲೀಸರ ಕಾರ್ಯಾಚರಣೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
🖋️ ರೆಹಮಾನ್ ಸಣ್ಣಕೇರೆ
ವಾರ್ತಾ ಸಾರಥಿ ಡಿಜಿಟಲ್ ನ್ಯೂಸ್




Comments
Post a Comment