ಬಾಳೆಹೊನ್ನೂರಿನಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ,


 ಬಾಳೆಹೊನ್ನೂರಿನಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ,

ಬಾಳೆಹೊನ್ನೂರು: ಬಾಳೆಹೊನ್ನೂರು ಕಡ್ಲೆಮಕ್ಕಿ ಸಮುದಾಯ ಭವನದಲ್ಲಿ ಸೋಮವಾರ, ಸೆಪ್ಟೆಂಬರ್ 7ರಂದು ಬಾಳೆಹೊನ್ನೂರು ಹೋಬಳಿ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ನಡೆಯಿತು.



ಸಮಾವೇಶವನ್ನು ಶೃಂಗೇರಿ ಕ್ಷೇತ್ರದ ಜನಪ್ರಿಯ ಶಾಸಕರಾದ ಟಿ. ಡಿ. ರಾಜೇಗೌಡ ಅವರು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಮುಖ್ಯ ಅತಿಥಿಗಳು ಹಾಗೂ ಶೃಂಗೇರಿ ಕ್ಷೇತ್ರದ ಮೂರು ತಾಲೂಕುಗಳ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಅಧ್ಯಕ್ಷರನ್ನು ಸನ್ಮಾನಿಸಲಾಯಿತು.



ಕಾರ್ಯಕ್ರಮದಲ್ಲಿ ಭದ್ರಾ ಕಾಡಾ ನಿಗಮದ ಅಧ್ಯಕ್ಷರಾದ ಡಾ. ಅಂಶುಮಂತ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಶಿವಾನಂದ ಸ್ವಾಮಿ, ಎನ್. ಆರ್. ಪುರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಚಂದ್ರಮ್ಮ, ಕೊಪ್ಪ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಓಣಿತೋಟ ರತ್ನಾಕರ್, ಶೃಂಗೇರಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಕೆ. ರಾಜು, ಎನ್. ಆರ್. ಪುರ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗೈರ್ಬೈಲ್ ನಟರಾಜ್, ಹನೀಫ್ ಬಾಳೆಹೊನ್ನೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದರೊಂದಿಗೆ ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯರು, ಬಾಳೆಹೊನ್ನೂರು ಹೋಬಳಿಯ ಕಾಂಗ್ರೆಸ್ ಮುಖಂಡರು, ನಾಮನಿರ್ದೇಶಿತ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಫಲಾನುಭವಿಗಳಿಗೆ ಮಾಹಿತಿ ನೀಡುವುದು ಹಾಗೂ ಯೋಜನೆಗಳ ಅನುಷ್ಠಾನವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದ ಈ ಸಮಾವೇಶವನ್ನು ಆಯೋಜಿಸಲಾಗಿತ್ತು.



Comments

Popular posts from this blog

ಕೊಪ್ಪ ಬಸ್ ನಿಲ್ದಾಣದ ಸಂಚಾರ ಸಮಸ್ಯೆಗೆ ಶಾಶ್ವತ ಪರಿಹಾರ – ಕೆಡಿಪಿ ಸದಸ್ಯ ಮಹಮ್ಮದ್ ಸಾದಿಕ್ ಅವರ ಸಮಯೋಚಿತ ಕ್ರಮಕ್ಕೆ ಸಾರ್ವಜನಿಕರ ಮೆಚ್ಚುಗೆ,

ಆಪತ್ತಿನ ಕ್ಷಣದಲ್ಲಿ ಜೀವ ಉಳಿಸಿದ ಕೊಪ್ಪ ಅಗ್ನಿಶಾಮಕ ದಳ – ಸಮಯಪ್ರಜ್ಞೆಯ ಕಾರ್ಯಾಚರಣೆಗೆ ಸಾರ್ವಜನಿಕರ ಮೆಚ್ಚು

ಕೊಪ್ಪ,ಅಕ್ರಮವಾಗಿ ಜಾನುವಾರು ಸಾಗಾಟ ಆರೋಪ: ಇಬ್ಬರ ವಶ, ವಾಹನ ಜಪ್ತಿ,