ಸಚಿವ ಸಂಪುಟದ ಮಹತ್ವದ ನಿರ್ಧಾರಗಳಿಗೆ ಓಣಿತೋಟ ರತ್ನಾಕರ್ ಸ್ವಾಗತ,


 

ಸಚಿವ ಸಂಪುಟದ ಮಹತ್ವದ ನಿರ್ಧಾರಗಳಿಗೆ ಓಣಿತೋಟ ರತ್ನಾಕರ್ ಸ್ವಾಗತ,

ಕೊಪ್ಪ: ಸೆಪ್ಟೆಂಬರ್ 9ರಂದು ನಡೆದ ಕರ್ನಾಟಕ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿರುವ ಎರಡು ಮಹತ್ವದ ನಿರ್ಧಾರಗಳನ್ನು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕೊಪ್ಪ ತಾಲ್ಲೂಕು ಅಧ್ಯಕ್ಷರಾದ ಓಣಿತೋಟ ರತ್ನಾಕರ್ ಸ್ವಾಗತಿಸಿದ್ದಾರೆ.

ಕೂಲಿ ಕಾರ್ಮಿಕರು ಸೇರಿದಂತೆ ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿ ವರ್ಗದ ನಿವೇಶನ ರಹಿತರಿಗೆ ಜಿಲ್ಲೆಯಲ್ಲಿ 50 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡುವ ಬೃಹತ್ ಕಾರ್ಯಕ್ರಮ ಹಾಗೂ ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಆಧಾರ್ ಕಾರ್ಡ್ ಬದಲಿಗೆ ಸ್ಮಾರ್ಟ್ ಕಾರ್ಡ್ ವಿತರಿಸುವ ನಿರ್ಧಾರ ಅತ್ಯಂತ ಮಹತ್ವದ್ದಾಗಿದೆ ಎಂದು ಅವರು ತಿಳಿಸಿದ್ದಾರೆ.



ಈ ಎರಡೂ ನಿರ್ಧಾರಗಳು ರಾಜ್ಯದ ಜನಸಾಮಾನ್ಯರಿಗೆ ಅನುಕೂಲವಾಗಲಿದ್ದು, ಕರ್ನಾಟಕದ ಇತಿಹಾಸದಲ್ಲಿ ಮಹತ್ವದ ಹೆಜ್ಜೆಗಳಾಗಿವೆ ಎಂದು ರತ್ನಾಕರ್ ಅಭಿಪ್ರಾಯಪಟ್ಟಿದ್ದಾರೆ.


ನಿವೇಶನ ರಹಿತರ ಸಮಸ್ಯೆ ಕುರಿತು ವಿಧಾನಸಭೆಯಲ್ಲಿ ಧ್ವನಿ ಎತ್ತಿ, ನಿವೇಶನ ರಹಿತರಿಗೆ ಹಕ್ಕುಪತ್ರ ನೀಡುವಂತೆ ಒತ್ತಾಯಿಸಿದ್ದ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ ಅವರಿಗೂ ಅವರು ಅಭಿನಂದನೆ ಸಲ್ಲಿಸಿದ್ದಾರೆ.



ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಹಾಗೂ ಶಾಸಕ ಟಿ.ಡಿ. ರಾಜೇಗೌಡ ಅವರಿಗೆ ಶೃಂಗೇರಿ ಕ್ಷೇತ್ರದ ಜನತೆಯ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಓಣಿತೋಟ ರತ್ನಾಕರ್ ತಿಳಿಸಿದ್ದಾರೆ.






Comments

Popular posts from this blog

ಕೊಪ್ಪ ಬಸ್ ನಿಲ್ದಾಣದ ಸಂಚಾರ ಸಮಸ್ಯೆಗೆ ಶಾಶ್ವತ ಪರಿಹಾರ – ಕೆಡಿಪಿ ಸದಸ್ಯ ಮಹಮ್ಮದ್ ಸಾದಿಕ್ ಅವರ ಸಮಯೋಚಿತ ಕ್ರಮಕ್ಕೆ ಸಾರ್ವಜನಿಕರ ಮೆಚ್ಚುಗೆ,

ಆಪತ್ತಿನ ಕ್ಷಣದಲ್ಲಿ ಜೀವ ಉಳಿಸಿದ ಕೊಪ್ಪ ಅಗ್ನಿಶಾಮಕ ದಳ – ಸಮಯಪ್ರಜ್ಞೆಯ ಕಾರ್ಯಾಚರಣೆಗೆ ಸಾರ್ವಜನಿಕರ ಮೆಚ್ಚು

ಕೊಪ್ಪ,ಅಕ್ರಮವಾಗಿ ಜಾನುವಾರು ಸಾಗಾಟ ಆರೋಪ: ಇಬ್ಬರ ವಶ, ವಾಹನ ಜಪ್ತಿ,