ಜಿಲ್ಲಾಮಟ್ಟದ ಕರಾಟೆ ಕ್ರೀಡಾಕೂಟದಲ್ಲಿ ಕೊಪ್ಪದ ಇಬ್ಬರು ವಿದ್ಯಾರ್ಥಿಗಳ ರಾಜ್ಯಮಟ್ಟಕ್ಕೆ ಆಯ್ಕೆ,
ಜಿಲ್ಲಾಮಟ್ಟದ ಕರಾಟೆ ಕ್ರೀಡಾಕೂಟದಲ್ಲಿ ಕೊಪ್ಪದ ಇಬ್ಬರು ವಿದ್ಯಾರ್ಥಿಗಳ ರಾಜ್ಯಮಟ್ಟಕ್ಕೆ ಆಯ್ಕೆ,
ಕೊಪ್ಪ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಕರಾಟೆ ಅಸೋಸಿಯೇಷನ್ ಸಹಯೋಗದಲ್ಲಿ ಸೆಪ್ಟೆಂಬರ್ 7ರಂದು ತರೀಕೆರೆಯ ಅಂಬೇಡ್ಕರ್ ಭವನದಲ್ಲಿ ನಡೆದ ಜಿಲ್ಲಾಮಟ್ಟದ ಕರಾಟೆ ಕ್ರೀಡಾಕೂಟದಲ್ಲಿ ಕೊಪ್ಪದ ಸೇಂಟ್ ಜೋಸೆಫ್ ಇಂಗ್ಲಿಷ್ ಮೀಡಿಯಂ ಶಾಲೆಯ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಅಂಡರ್-14ರ 50ರಿಂದ 55 ಕೆ.ಜಿ. ವಿಭಾಗದಲ್ಲಿ ಸಣ್ಣಕೆರೆಯ ಅಬಿಶ್ ರುಹಿನ್ ಸೋನ್ಸ್, ಹಾಗೂ ಅಂಡರ್-17ರ 70 ಕೆ.ಜಿ. ವಿಭಾಗದಲ್ಲಿ ಕಶ್ಯಪ್ ಜಿ.ಆರ್. ಅವರು ಉತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟದ ಸ್ಪರ್ಧೆಗೆ ನೇರ ಆಯ್ಕೆ ಪಡೆದುಕೊಂಡಿದ್ದಾರೆ.
ಅಬಿಶ್ ರುಹಿನ್ ಸೋನ್ಸ್ ಅವರು ಅಲೈವ್ ಸ್ಟಾರ್ಲಿ ಸೋನ್ಸ್ ಹಾಗೂ ರುತ್ ಸೋನ್ಸ್, ಸಣ್ಣಕೆರೆ ಅವರ ಪುತ್ರರಾಗಿದ್ದು, ಸೇಂಟ್ ಜೋಸೆಫ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
ಇಬ್ಬರು ವಿದ್ಯಾರ್ಥಿಗಳೂ ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ತಮ್ಮ ಪ್ರತಿಭೆ ಹಾಗೂ ಕಠಿಣ ಪರಿಶ್ರಮವನ್ನು ಪ್ರದರ್ಶಿಸಿ ರಾಜ್ಯಮಟ್ಟಕ್ಕೆ ಅರ್ಹತೆ ಪಡೆದಿರುವುದು ಕೊಪ್ಪ ತಾಲ್ಲೂಕಿಗೆ ಹೆಮ್ಮೆಯ ಸಂಗತಿಯಾಗಿದೆ.
ರಾಜ್ಯಮಟ್ಟದ ಕರಾಟೆ ಕ್ರೀಡಾಕೂಟ ಬೆಂಗಳೂರಿನ ಉತ್ತರ ವಲಯದಲ್ಲಿ ನಡೆಯಲಿದ್ದು, ರಾಜ್ಯಮಟ್ಟದಲ್ಲೂ ಉತ್ತಮ ಸಾಧನೆ ಮಾಡುವ ವಿಶ್ವಾಸವನ್ನು ವಿದ್ಯಾರ್ಥಿಗಳು ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಪೋಷಕರು ಹಾಗೂ ಸ್ಥಳೀಯರು ಅಭಿನಂದನೆ ಸಲ್ಲಿಸಿ, ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಯಶಸ್ಸು ಸಾಧಿಸುವಂತೆ ಶುಭ ಹಾರೈಸಿದ್ದಾರೆ.



Comments
Post a Comment