ಕೊಪ್ಪ ಪೊಲೀಸರ ಭರ್ಜರಿ ಕಾರ್ಯಾಚರಣೆ: ಅಕ್ರಮ ಮರಳು ಸಾಗಾಟಕ್ಕೆ ಬ್ರೇಕ್!,




 ಕೊಪ್ಪ ಪೊಲೀಸರ ಭರ್ಜರಿ ಕಾರ್ಯಾಚರಣೆ: ಅಕ್ರಮ ಮರಳು ಸಾಗಾಟಕ್ಕೆ ಬ್ರೇಕ್!,


ಕೊಪ್ಪ ಪೊಲೀಸ್ ಠಾಣೆ ಪಿಎಸ್‌ಐ ಮಧು ಬಿ.ಇ. ನೇತೃತ್ವದ ಪೊಲೀಸ್ ತಂಡದಿಂದ ಅಕ್ರಮ ಮರಳು ಸಾಗಾಟದ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ,

ದಿನಾಂಕ 07/09/2026 ರಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ, ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಮರಳನ್ನು ಸಾಗಿಸುತ್ತಿದ್ದ KA-14 B-4400 ನೋಂದಣಿ ಸಂಖ್ಯೆಯ ಟಿಪ್ಪರ್‌ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.



ಈ ವೇಳೆ ತೀರ್ಥಹಳ್ಳಿ ತಾಲೂಕಿನ ದೇವಂಗಿ ಗ್ರಾಮದ ರಾಘವೇಂದ್ರ ಬಾಣಂಕ್ಕಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು, ಮುಂದಿನ ಕಾನೂನು ಕ್ರಮ ಕೈಗೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಇನ್ನು ಈ ಅಕ್ರಮ ಮರಳು ಸಾಗಾಟ ಪ್ರಕರಣದಲ್ಲಿ ಹಲವರು ಭಾಗಿಯಾಗಿದ್ದಾರೆ ಎನ್ನಲಾಗಿದೆ ಅವರ ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ.

ಅಕ್ರಮ ಮರಳು ದಂಧೆಕೋರರಿಗೆ ಸಿಂಹಸ್ವಪ್ನವಾಗಿರುವ ಕೊಪ್ಪ ಪೊಲೀಸರು, ನೈಸರ್ಗಿಕ ಸಂಪನ್ಮೂಲಗಳ ಅಕ್ರಮ ಸಾಗಾಟಕ್ಕೆ ಕಡಿವಾಣ ಹಾಕಲು ಕಾರ್ಯಾಚರಣೆ ಮುಂದುವರಿಸಿದ್ದಾರೆ.

Comments

Popular posts from this blog

ಕೊಪ್ಪ ಬಸ್ ನಿಲ್ದಾಣದ ಸಂಚಾರ ಸಮಸ್ಯೆಗೆ ಶಾಶ್ವತ ಪರಿಹಾರ – ಕೆಡಿಪಿ ಸದಸ್ಯ ಮಹಮ್ಮದ್ ಸಾದಿಕ್ ಅವರ ಸಮಯೋಚಿತ ಕ್ರಮಕ್ಕೆ ಸಾರ್ವಜನಿಕರ ಮೆಚ್ಚುಗೆ,

ಆಪತ್ತಿನ ಕ್ಷಣದಲ್ಲಿ ಜೀವ ಉಳಿಸಿದ ಕೊಪ್ಪ ಅಗ್ನಿಶಾಮಕ ದಳ – ಸಮಯಪ್ರಜ್ಞೆಯ ಕಾರ್ಯಾಚರಣೆಗೆ ಸಾರ್ವಜನಿಕರ ಮೆಚ್ಚು

ಕೊಪ್ಪ,ಅಕ್ರಮವಾಗಿ ಜಾನುವಾರು ಸಾಗಾಟ ಆರೋಪ: ಇಬ್ಬರ ವಶ, ವಾಹನ ಜಪ್ತಿ,