ಜಂಕ್ ಫುಡ್ ವಿರುದ್ಧ ವಿದ್ಯಾರ್ಥಿಗಳ ಜಾಗೃತಿ ಮೆರವಣಿಗೆ


 

ಜಂಕ್ ಫುಡ್ ವಿರುದ್ಧ ವಿದ್ಯಾರ್ಥಿಗಳ ಜಾಗೃತಿ ಮೆರವಣಿಗೆ,

ಕೊಪ್ಪ: ಹದಿಹರೆಯದ ಮಕ್ಕಳಲ್ಲಿ ಆರೋಗ್ಯದ ಅರಿವು ಮೂಡಿಸುವ ಹಾಗೂ ಜಂಕ್ ಫುಡ್‌ನ ಅತಿಯಾದ ಸೇವನೆಯಿಂದ ದೂರವಿರುವಂತೆ ಜಾಗೃತಿ ಮೂಡಿಸುವ ಉದ್ದೇಶದಿಂದ St. Joseph's English Medium School, Koppa ಇವರ ಆಶ್ರಯದಲ್ಲಿ ವಿದ್ಯಾರ್ಥಿಗಳ ಜಾಗೃತಿ ಮೆರವಣಿಗೆ ನಡೆಯಿತು.



ವಿದ್ಯಾರ್ಥಿಗಳು ಜಾಗೃತಿ ಫಲಕಗಳನ್ನು ಹಿಡಿದು, “ಜಂಕ್ ಫುಡ್ ಬಳಕೆ ಕಡಿಮೆ ಮಾಡಿ, ಆರೋಗ್ಯಕರ ಆಹಾರ ಸೇವಿಸಿ” ಎಂಬ ಸಂದೇಶ ಸಾರುತ್ತಾ ಕೊಪ್ಪ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು.

ನಂತರ ಕೊಪ್ಪ ಬಸ್ ನಿಲ್ದಾಣದ ಮುಂಭಾಗ ನಡೆದ ಜಾಗೃತಿ ಸಭೆಯಲ್ಲಿ ಪೌಷ್ಟಿಕ ಆಹಾರ, ಸ್ವಚ್ಛತೆ ಹಾಗೂ ದೈಹಿಕ ಚಟುವಟಿಕೆಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಾಯಿತು.



ದೈಹಿಕ ಶಿಕ್ಷಕ ಅರವಿಂದ್ ಹಾಗೂ ಶಾಲಾ ಶಿಕ್ಷಕರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸಿದರು.



Comments

Popular posts from this blog

ಕೊಪ್ಪ ಬಸ್ ನಿಲ್ದಾಣದ ಸಂಚಾರ ಸಮಸ್ಯೆಗೆ ಶಾಶ್ವತ ಪರಿಹಾರ – ಕೆಡಿಪಿ ಸದಸ್ಯ ಮಹಮ್ಮದ್ ಸಾದಿಕ್ ಅವರ ಸಮಯೋಚಿತ ಕ್ರಮಕ್ಕೆ ಸಾರ್ವಜನಿಕರ ಮೆಚ್ಚುಗೆ,

ಆಪತ್ತಿನ ಕ್ಷಣದಲ್ಲಿ ಜೀವ ಉಳಿಸಿದ ಕೊಪ್ಪ ಅಗ್ನಿಶಾಮಕ ದಳ – ಸಮಯಪ್ರಜ್ಞೆಯ ಕಾರ್ಯಾಚರಣೆಗೆ ಸಾರ್ವಜನಿಕರ ಮೆಚ್ಚು

ಕೊಪ್ಪ,ಅಕ್ರಮವಾಗಿ ಜಾನುವಾರು ಸಾಗಾಟ ಆರೋಪ: ಇಬ್ಬರ ವಶ, ವಾಹನ ಜಪ್ತಿ,