ಸರ್ಕಾರ ಗುಂಡಿ ಮುಚ್ಚದಿದ್ದರೆ, ಸಾರ್ವಜನಿಕರಿಂದ ದೇಣಿಗೆ ಸಂಗ್ರಹ ಮಾಡಿ ಜೆಡಿಎಸ್ ಪಕ್ಷದ ವತಿಯಿಂದ ರಸ್ತೆ ಗುಂಡಿಗಳನ್ನು ಮುಚ್ಚಲಾಗುವುದು, ಸುಧಾಕರ್ ಎಸ್ ಶೆಟ್ಟಿ,
ಸರ್ಕಾರ ಗುಂಡಿ ಮುಚ್ಚದಿದ್ದರೆ, ಸಾರ್ವಜನಿಕರಿಂದ ದೇಣಿಗೆ ಸಂಗ್ರಹ ಮಾಡಿ ಜೆಡಿಎಸ್ ಪಕ್ಷದ ವತಿಯಿಂದ ರಸ್ತೆ ಗುಂಡಿಗಳನ್ನು ಮುಚ್ಚಲಾಗುವುದು, ಸುಧಾಕರ್ ಎಸ್ ಶೆಟ್ಟಿ,
ದಸರಕ್ಕೂ ಮುನ್ನ ರಸ್ತೆ ದುರಸ್ತಿ ಕೈಗೊಳ್ಳುವಂತೆ ಶಾಸಕ ಟಿ.ಡಿ. ರಾಜೇಗೌಡರಿಗೆ,ಸುಧಾಕರ್ ಎಸ್. ಶೆಟ್ಟಿಆಗ್ರಹ,
ಕೊಪ್ಪ: ಶೃಂಗೇರಿ ಕ್ಷೇತ್ರದ ವಿವಿಧೆಡೆ ಹದಗೆಟ್ಟಿರುವ ರಸ್ತೆಗಳನ್ನು ತಕ್ಷಣ ದುರಸ್ತಿ ಮಾಡಿ, ರಸ್ತೆ ಹೊಂಡ-ಗುಂಡಿಗಳನ್ನು ಮುಚ್ಚುವಂತೆ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ
ಅವರನ್ನು ಜೆಡಿಎಸ್ ರಾಷ್ಟ್ರೀಯ ವಕ್ತಾರ ಸುಧಾಕರ್ ಎಸ್. ಶೆಟ್ಟಿ ಆಗ್ರಹಿಸಿದರು.
ಬಾಲಗಡಿಯಲ್ಲಿರುವ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಕಳೆದ 2025ರ ಅಕ್ಟೋಬರ್ 29ರಂದು ಕೊಪ್ಪ ಮೇಲಿನ ಪೇಟೆಯಿಂದ ವಾಟರ್ ಟ್ಯಾಂಕ್ವರೆಗೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದ ಸಂದರ್ಭದಲ್ಲಿ ತಮ್ಮ ನೇತೃತ್ವದಲ್ಲಿ ಸ್ವಂತ ಖರ್ಚಿನಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಿಸಲಾಗಿತ್ತು. ಈ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿತ್ತು ಎಂದು ತಿಳಿಸಿದರು.
ಇದೀಗ ದಸರಾ ಮಹೋತ್ಸವ ಸಮೀಪಿಸುತ್ತಿದ್ದು, ಶೃಂಗೇರಿ, ಹರಿಹರಪುರ, ಬಸ್ತಿಮಠ, ಬಂಡಿಗಡಿ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ಪ್ರತಿದಿನ ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಆದರೆ ಕೊಪ್ಪ ಮುಖ್ಯರಸ್ತೆ,ಶೃಂಗೇರಿ ಪಟ್ಟಣದ ಭಾರತೀ ಬೀದಿ ಸೇರಿದಂತೆ ಹಲವು ಪ್ರಮುಖ ರಸ್ತೆಗಳು ಗುಂಡಿಗಳಿಂದ ಹದಗೆಟ್ಟಿದ್ದು, ಸಾರ್ವಜನಿಕರು ಹಾಗೂ ಪ್ರವಾಸಿಗರು ಸಂಚಾರದ ವೇಳೆ ತೊಂದರೆ ಅನುಭವಿಸುವಂತಾಗಿದೆ ಎಂದು ಹೇಳಿದರು.
ಅಕ್ಟೋಬರ್ 10ರೊಳಗೆ ರಸ್ತೆ ಹೊಂಡ-ಗುಂಡಿಗಳನ್ನು ಮುಚ್ಚಿಸಿ, ಅಗತ್ಯ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಬೇಕು. ಇಲ್ಲವಾದರೆ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಿ, ಜೆಡಿಎಸ್ ಪಕ್ಷದ ವತಿಯಿಂದಲೇ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯಕ್ಕೆ ಮುಂದಾಗಬೇಕಾಗುತ್ತದೆ ಎಂದು ಸುಧಾಕರ್ ಎಸ್. ಶೆಟ್ಟಿ ಎಚ್ಚರಿಕೆ ನೀಡಿದರು.
ದಸರಾ ಸಂದರ್ಭದಲ್ಲಿ ಕ್ಷೇತ್ರಕ್ಕೆ ಆಗಮಿಸುವ ಪ್ರವಾಸಿಗರಿಗೆ ಉತ್ತಮ ರಸ್ತೆ ಸೌಲಭ್ಯ ಕಲ್ಪಿಸುವುದರ ಜೊತೆಗೆ, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಸಂಬಂಧಪಟ್ಟ ಇಲಾಖೆ ಹಾಗೂ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.





Comments
Post a Comment