ಮಲೆನಾಡಿನ ಸಮಸ್ಯೆಗಳ ಕುರಿತು ಸಂವಾದಕ್ಕೆ ಡಿ.ಕೆ. ಶಿವಕುಮಾರ್ ಬಾಳೆಹೊನ್ನೂರಿಗೆ ಭೇಟಿ,


 ಮಲೆನಾಡಿನ ಸಮಸ್ಯೆಗಳ ಕುರಿತು ಸಂವಾದಕ್ಕೆ ಡಿ.ಕೆ. ಶಿವಕುಮಾರ್ ಬಾಳೆಹೊನ್ನೂರಿಗೆ ಭೇಟಿ,


ಚಿಕ್ಕಮಗಳೂರು ಜಿಲ್ಲೆ: ಶೃಂಗೇರಿ ಕ್ಷೇತ್ರದ ಜನಪ್ರಿಯ ಶಾಸಕ ಟಿ.ಡಿ. ರಾಜೇಗೌಡ ಸೇರಿದಂತೆ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಜಿಲ್ಲಾ ಕಾಂಗ್ರೆಸ್ ಮುಖಂಡರ ಪ್ರಯತ್ನದ ಫಲವಾಗಿ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೆಪ್ಟೆಂಬರ್ 19ರಂದು ಬಾಳೆಹೊನ್ನೂರಿಗೆ ಭೇಟಿ ನೀಡಲಿದ್ದಾರೆ.



ಸೆಪ್ಟೆಂಬರ್ 19ರ ಶನಿವಾರ ಮಧ್ಯಾಹ್ನ 1 ಗಂಟೆಗೆ ಬಾಳೆಹೊನ್ನೂರಿನ ಗಣಪತಿ ಪೆಂಡಾಲ್ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಮಲೆನಾಡು ಭಾಗದ ರೈತರು ಹಾಗೂ ಸಾರ್ವಜನಿಕರೊಂದಿಗೆ ನೇರವಾಗಿ ಸಂವಾದ ನಡೆಸಿ, ಮಲೆನಾಡಿನ ವಿವಿಧ ಸಮಸ್ಯೆಗಳನ್ನು ಆಲಿಸುವ ಕಾರ್ಯಕ್ರಮ ನಡೆಯಲಿದೆ.


ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಕಳಸ, ಮೂಡಿಗೆರೆ ಹಾಗೂ ಚಿಕ್ಕಮಗಳೂರು ತಾಲೂಕುಗಳ ರೈತರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ನೇರವಾಗಿ ತಿಳಿಸುವಂತೆ ಮನವಿ ಮಾಡಲಾಗಿದೆ.


ಮಲೆನಾಡಿನ ಜನರ ಪ್ರಮುಖ ಸಮಸ್ಯೆಗಳು, ರೈತರ ವಿಚಾರಗಳು ಹಾಗೂ ಸಾರ್ವಜನಿಕರ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜನರೊಂದಿಗೆ ನೇರವಾಗಿ ಚರ್ಚಿಸಲಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ಮಹತ್ವ ಪಡೆದುಕೊಂಡಿದೆ.



ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಶಾಸಕರಾದ ಟಿ.ಡಿ. ರಾಜೇಗೌಡ, ಹೆಚ್.ಟಿ. ತಮ್ಮಯ್ಯ, ನಯನ ಮೋಟಮ್ಮ, ಶ್ರೀನಿವಾಸ್ ತರೀಕೆರೆ, ಆನಂದ್ ಕಡೂರು, ವಿಧಾನ ಪರಿಷತ್ ಸದಸ್ಯರಾದ ಗಾಯತ್ರಿ ಶಾಂತೇಗೌಡ, ಆರತಿ ಕೃಷ್ಣ ಸೇರಿದಂತೆ ಜಿಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಪ್ರಮುಖರು ಭಾಗವಹಿಸಲಿದ್ದಾರೆ.


ಮಲೆನಾಡಿನ ಜನತೆಯ ಪರವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಹಾರ್ದಿಕ ಸ್ವಾಗತ ಕೋರಲಾಗಿದೆ.

ಓಣಿತೋಟ ರತ್ನಾಕರ್

ಅಧ್ಯಕ್ಷರು, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ಕೊಪ್ಪ

Comments

Popular posts from this blog

ಕೊಪ್ಪ ಬಸ್ ನಿಲ್ದಾಣದ ಸಂಚಾರ ಸಮಸ್ಯೆಗೆ ಶಾಶ್ವತ ಪರಿಹಾರ – ಕೆಡಿಪಿ ಸದಸ್ಯ ಮಹಮ್ಮದ್ ಸಾದಿಕ್ ಅವರ ಸಮಯೋಚಿತ ಕ್ರಮಕ್ಕೆ ಸಾರ್ವಜನಿಕರ ಮೆಚ್ಚುಗೆ,

ಆಪತ್ತಿನ ಕ್ಷಣದಲ್ಲಿ ಜೀವ ಉಳಿಸಿದ ಕೊಪ್ಪ ಅಗ್ನಿಶಾಮಕ ದಳ – ಸಮಯಪ್ರಜ್ಞೆಯ ಕಾರ್ಯಾಚರಣೆಗೆ ಸಾರ್ವಜನಿಕರ ಮೆಚ್ಚು

ಕೊಪ್ಪ,ಅಕ್ರಮವಾಗಿ ಜಾನುವಾರು ಸಾಗಾಟ ಆರೋಪ: ಇಬ್ಬರ ವಶ, ವಾಹನ ಜಪ್ತಿ,