ಮಾಜಿ ಯೋಧನಿಗೆ ಜಾತಿ ಪ್ರಮಾಣಪತ್ರ ರಿಜೆಕ್ಟ್
ಯೋಧನಿಗೆ ಜಾತಿ ಪ್ರಮಾಣಪತ್ರ ನೀಡುವಂತೆ ಅಧಿಕಾರಿಗಳಿಗೆ ತರಾಟೆ,
ಕೊಪ್ಪ: ದೇಶ ರಕ್ಷಣೆಗಾಗಿ ಸೇವೆ ಸಲ್ಲಿಸಿದ ಯೋಧರೊಬ್ಬರಿಗೆ ಜಾತಿ ಪ್ರಮಾಣಪತ್ರ ನೀಡುವ ವಿಚಾರದಲ್ಲಿ ಹಲವು ತಿಂಗಳುಗಳಿಂದ ವಿಳಂಬವಾಗಿರುವ ಬಗ್ಗೆ ಸಾರ್ವಜನಿಕರಿಂದ ಅಸಮಾಧಾನ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 12ರಂದು ಶನಿವಾರ ನಡೆದ ತಾಲ್ಲೂಕು ಮಟ್ಟದ ಪ್ರಜಾ ಸೇವಾ ಜನಾಂದೋಲನ ಕಾರ್ಯಕ್ರಮದಲ್ಲಿ ವಿಷಯ ಪ್ರಸ್ತಾಪಗೊಂಡಿತು.
ಯೋಧನಿಗೆ ಜಾತಿ ಪ್ರಮಾಣಪತ್ರ ನೀಡಲು ವಿಳಂಬ ಮಾಡುತ್ತಿರುವ ಕಂದಾಯ ಇಲಾಖೆಯ ಅಧಿಕಾರಿಗಳನ್ನು ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ ಹಾಗೂ ವಕೀಲರಾದ ಕಾಂಗ್ರೆಸ್ ಪಕ್ಷದ ರಾಜ್ಯ ವಕ್ತಾರರಾದ ಸುಧೀರ್ ಕುಮಾರ್ ಮೂರೊಲ್ಲಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡು, ಜನಸಾಮಾನ್ಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಖ್ಯಾತ ವಕೀಲರು ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ ಅವರು ಕೂಡ ಯೋಧನ ಸಮಸ್ಯೆಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಧ್ವನಿ ಎತ್ತಿ, ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸಿದರು.
ದೇಶಕ್ಕಾಗಿ ಸೇವೆ ಸಲ್ಲಿಸಿದ ಯೋಧನೊಬ್ಬ ತನ್ನ ಮೂಲಭೂತ ದಾಖಲೆಗಾಗಿ ಹಲವು ತಿಂಗಳುಗಳಿಂದ ಕಚೇರಿಗಳಿಗೆ ಅಲೆದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದು ಬೇಸರದ ಸಂಗತಿ. ಈ ವಿಚಾರದಲ್ಲಿ ಶಾಸಕ ಟಿ.ಡಿ. ರಾಜೇಗೌಡ ಹಾಗೂ ಸುಧೀರ್ ಕುಮಾರ್ ಮುರೊಳ್ಳಿ ಅವರು ಜನಸಾಮಾನ್ಯರ ಪರವಾಗಿ ಧ್ವನಿ ಎತ್ತಿ, ಯೋಧನಿಗೆ ನ್ಯಾಯ ದೊರಕಿಸಲು ಮುಂದಾಗಿರುವುದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
🖋️ ರೆಹಮಾನ್ ಸಣ್ಣಕೇರೆ
ವಾರ್ತಾ ಸಾರಥಿ ಡಿಜಿಟಲ್ ನ್ಯೂಸ್




Comments
Post a Comment